ಉತ್ತರಪ್ರದೇಶದ ಜೈಲುಗಳಲ್ಲಿ ಗೋಶಾಲೆ ಪ್ರಾರಂಭಿಸಲು ಯೋಗಿ ಆದಿತ್ಯನಾಥ್ ಚಿಂತನೆ ಗೋ ಸಂರಕ್ಷಣೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೊಸ ಯೋಜನೆ ಮಾಡಿದ್ದು ಇನ್ನುಮುಂದೆ ಉತ್ತರ ಪ್ರದೇಶದ ಜೈಲುಗಳು ಗೋಶಾಲೆಗಳಾಗಳಿವೆ.
ಬೆಂಗಳೂರು: ಕಾವೇರಿ ಕಣಿಯ ಹಾರಂಗಿ ಜಲಾಶಯ ಭರ್ತಿಯಾಗಿದ್ದು ಶನಿವಾರ ಸಂಜೆ ನದಿಗೆ ನೀರು ಬಿಡಲಾಗಿದೆ.
ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಒಳಹರಿವಿನಲ್ಲಿ 24,300 ಕ್ಯುಸೆಕ್‌ಗೆ ಏರಿಕೆಯಾಗಿದೆ. ನಾಲ್ಕು ಕ್ರಸ್ಟ್‌ಗೇಟ್‌ಗಳ ಮೂಲಕ 1,200 ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, 2,854.50 ಅಡಿ ನೀರಿದೆ.
ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಭಾಗಮಂಡಲ ಜಲಾವೃತವಾಗಿದೆ. ತ್ರಿವೇಣಿ ಸಂಗಮದ ಸ್ನಾನಘಟ್ಟದಲ್ಲಿ ಅಪಾರ ಪ್ರಮಾಣ ನೀರು ಸಂಗ್ರಹವಾಗಿದ್ದು ಭಗಂಡೇಶ್ವರ ದೇಗುಲಕ್ಕೆ ತೆರಳಲು ಭಕ್ತರಿಗೆ ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯ ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಸೇತುವೆ ಮುಳುಗಡೆ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರಿದಿದ್ದು, ಚಿಕ್ಕೋಡಿ ತಾಲ್ಲೂಕಿನ ಎರಡು ಸೇತುವೆಗಳು ಮುಳುಗಡೆಯಾಗಿವೆ.
ಮಹಾರಾಷ್ಟ್ರದ ಗಡಿಯಲ್ಲಿರುವ ರಾಜಾಪುರ ಬ್ಯಾರೇಜ್‌ನಿಂದ 52,031 ಕ್ಯುಸೆಕ್‌ ನೀರು ಹೊರಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ನದಿ ನೀರಿನ ಹರಿವು ಹೆಚ್ಚಳವಾಗಿದೆ.

Comments